ಚಿತ್ರದುರ್ಗ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಗೆ(Rain) ಚಿತ್ರದುರ್ಗ ಜಿಲ್ಲೆ ನಲುಗಿದೆ. ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ಮಹಿಳೆ ಸಾವನಪ್ಪಿರುವ(woman dies due to house wall collapses) ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

ತ್ರಿವೇಣಿ (24) ಮೃತ ಮಹಿಳೆ. ವಿಷಯ ತಿಳಿದ ತಕ್ಷಣ ಪಿಎಸ್ಐ ಪರಶುರಾಮ ಎನ್ ಲಮಾಣಿ(PSI Parasuram.N Lamani) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡು ದಿನ ರಜೆ ಘೋಷಣೆ:
ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಗಳಲ್ಲಿ ವಾಯುಭಾರ ಕುಸಿತ(Low-pressure area) ಹಿನ್ನೆಲೆ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನೂ ಹಲವು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(Meteorology Department) ಮುನ್ಸೂಚನೆ ನೀಡಿದೆ.

ಮಳೆ ಮುಂದುವರೆಯುವ ಮುನ್ನೂಚನೆ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯ ಶಾಲಾ ಮಕ್ಕಳು ಮತ್ತು ಶಿಕ್ಷಕರ ಹಿತದೃಷ್ಟಿಯಿಂದ ಇಂದು (ಶುಕ್ರವಾರ) ಮತ್ತು ನಾಳೆ (ಶನಿವಾರ) ಎರಡು ದಿನಗಳ ಕಾಲ 1 ರಿಂದ 10ನೇ ತರಗತಿಯವರೆಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ(DC Kavita S. Mannikeri) ಆದೇಶಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಗೆ ಬರುವ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರಿ ಮಳೆ: ಕಟ್ಟಡ ಕುಸಿತ, ಜನಜೀವನ ಅಸ್ತವ್ಯಸ್ತ