ಚಿತ್ರದುರ್ಗ: ಲಡಾಖ್ ಪ್ರಾಂತ್ಯದ ಗಾಲ್ವಾನ್ ಕಣಿವೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ಚೀನಾ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಾಪಿ ಚೀನಿ ವಸ್ತುಗಳನ್ನು ಬಳಸಬಾರದು ಎಂದು ಆಕ್ರೋಶ ಹೊರ ಹಾಕಿದರು. ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರಿಂದ ಈ ಪ್ರತಿಭಟನೆ ನಡೆಸಲಾಯಿತು.
ನಗರದ ಒನಕೆ ಓಬವ್ವ ವೃತ್ತದಲ್ಲಿ ಕಾರ್ಯಕರ್ತರು ಜಮಾಯಿಸಿ ಚೀನಾ ವಿರುದ್ಧ ಘೋಷಣೆ ಕೂಗುವ ಮೂಲಕ ಕಮ್ಯುನಿಸ್ಟ್ ಚೀನಾದ ನಡೆಯನ್ನು ವಿರೋಧಿಸಿದರು.