ETV Bharat / state

ಮಂಗಳೂರು ಏರ್ಪೋರ್ಟ್‌: ಆಟಿಕೆ ಕಿಚನ್ ಸೆಟ್​ನಲ್ಲಿ 10 ಲಕ್ಷ ಮೌಲ್ಯದ ಚಿನ್ನ ಸಾಗಾಟ ಪತ್ತೆ - 219 gram gold seized in manglore airport

ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಟಿಕೆ ಅಡುಗೆ ಸಾಮಾಗ್ರಿ ಸೆಟ್​​ನಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 219 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದವನನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

airport
10 ಲಕ್ಷ ರೂ ಮೌಲ್ಯದ ಬಂಗಾರ ವಶ
author img

By

Published : Sep 14, 2021, 8:04 PM IST

ಮಂಗಳೂರು: ಆಟಿಕೆ ಅಡುಗೆ ಸಾಮಾಗ್ರಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ (26) ಎಂಬಾತ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ. ಈತ ಇಂದು ಮಧ್ಯಾಹ್ನ 2 ಗಂಟೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದ.

ವಿಮಾನ ನಿಲ್ದಾಣದಲ್ಲಿ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಈತನನ್ನು ತಪಾಸಣೆ ಮಾಡುತ್ತಿದ್ದ ವೇಳೆ ಈತ ತನ್ನ ಬಳಿಯಿದ್ದ 2 ಆಟಿಕೆ ಅಡುಗೆ ಸಾಮಾಗ್ರಿ ಸೆಟ್​​ನಲ್ಲಿ ಚಿನ್ನ ಅಡಗಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಇದರಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 219 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ರೂ 10,55,580 ಎಂದು ಅಂದಾಜಿಸಲಾಗಿದೆ. ಚಿನ್ನ ಮತ್ತು ಪ್ರಯಾಣಿಕ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್​​ನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ದೇಶದ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಸ್ಕೆಚ್‌: ಪಾಕ್‌ನಲ್ಲಿ ತರಬೇತಿ ಪಡೆದ ಇಬ್ಬರು ಉಗ್ರರು ಸೇರಿ 6 ಜನರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.