ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು 12 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 557 ಕ್ಕೆ ಏರಿಕೆಯಾಗಿದೆ.
ಇಂದಿನ ಕೊರೊನಾ ವಿವರ:
ಜಿಲ್ಲೆಯಲ್ಲಿ ಇಂದು 322 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23,761 ಕ್ಕೆ ಏರಿಕೆಯಾಗಿದೆ.
ಗುಣಮುಖ :
ಜಿಲ್ಲೆಯಲ್ಲಿ ಇಂದು 277 ಮಂದಿ ಗುಣಮುಖರಾಗಿದ್ದು, ಈವರೆಗೆ 17,365 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಇನ್ನೂ 5,839 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ಪರೀಕ್ಷೆ:
ಜಿಲ್ಲೆಯಲ್ಲಿ ಈವರೆಗೆ 16,6456 ಮಂದಿಯ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 14,2695 ಮಂದಿಗೆ ನೆಗೆಟಿವ್ ಬಂದಿದೆ.