ETV Bharat / state

ದ.ಕ ಜಿಲ್ಲೆಯಲ್ಲಿ ಇಂದು 13 ಕೊರೊನಾ ಸೋಂಕಿತರು ಗುಣಮುಖ

author img

By

Published : Jun 2, 2020, 11:11 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 137 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಆ ಪೈಕಿ 69 ಮಂದಿ ಗುಣಮುಖರಾಗಿದ್ದಾರೆ.

ದ.ಕ ಜಿಲ್ಲೆಯಲ್ಲಿ ಇಂದು 13 ಮಂದಿ ಕೊರೊನಾ ಸೋಂಕಿತರು ಗುಣಮುಖ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 7 ಮಂದಿ ಮಹಿಳೆಯರು ಮತ್ತು 6 ಮಂದಿ ಪುರುಷರು ಸೇರಿ ಒಟ್ಟು 13 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.

ಇವರು ಮೇ‌ 2 ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 40 ವರ್ಷದ ಮಹಿಳೆಗೆ ಕೋವಿಡ್ -19 ಸೋಂಕಿನ ಜೊತೆಗೆ ಮೂತ್ರಕೋಶದ ತೊಂದರೆ, ಮಧುಮೇಹ ಸಮಸ್ಯೆ ಇದ್ದು, ಇವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಇವರೆಲ್ಲರೂ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 137 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇದರಲ್ಲಿ 69 ಮಂದಿ ಗುಣಮುಖರಾಗಿದ್ದಾರೆ. ಇಂದು 113 ಜನರ ಗಂಟಲು ದ್ರವ ಪರೀಕ್ಷೆಯ ವರದಿ ನೆಗೆಟಿವ್ ಬಂದಿದ್ದು, ಜಿಲ್ಲೆಯಲ್ಲಿ ಈ ವರೆಗೆ 7 ಮಂದಿ ಸಾವನ್ನಪ್ಪಿದ್ದು, 61 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.