ETV Bharat / state

ಸುರತ್ಕಲ್ ಯುವಕನ ಹತ್ಯೆ: ನಿಷೇಧಾಜ್ಞೆ ಜಾರಿ, ಶಾಲಾ-ಕಾಲೇಜಿಗೆ ರಜೆ, ಮದ್ಯದಂಗಡಿ ಬಂದ್

author img

By

Published : Jul 29, 2022, 8:22 AM IST

Updated : Jul 29, 2022, 9:49 AM IST

ಸುರತ್ಕಲ್​ನಲ್ಲಿ ಗುರುವಾರ ರಾತ್ರಿ ನಡೆದ ಯುವಕನ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

144-section-and-holiday-for-school-in-mangaluru-after-youth-murder
ಸುರತ್ಕಲ್ ಯುವಕನ ಹತ್ಯೆ: ನಿಷೇಧಾಜ್ಞೆ ಜಾರಿ, ಶಾಲಾ-ಕಾಲೇಜಿಗೆ ರಜೆ, ಮದ್ಯದಂಗಡಿ ಬಂದ್

ಮಂಗಳೂರು: ಸುರತ್ಕಲ್​ನಲ್ಲಿ ಗುರುವಾರ ರಾತ್ರಿ ನಡೆದ ಯುವಕನ ಹತ್ಯೆ ನಡೆದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಮುಲ್ಕಿ, ಬಜ್ಪೆ ಮತ್ತು ಪಣಂಬೂರು ಠಾಣೆಯಲ್ಲಿ 144 ಸೆಕ್ಷನ್​ನಡಿ ನಿಷೇಧಾಜ್ಞೆ ಹೇರಲಾಗಿತ್ತು. ಬಳಿಕ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ನಂತರ ಗುರುವಾರ ರಾತ್ರಿ ಸುರತ್ಕಲ್​​ನಲ್ಲಿ ಅಂಗಡಿಯೊಂದರ ಬಳಿ ನಿಂತಿದ್ದ ಫಾಜಿಲ್ ಎಂಬ ಯುವಕನನ್ನು ಕಾರಿನಲ್ಲಿ ಬಂದ ಯುವಕರು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದರು. ಇದರ ಬಳಿಕ ಮತ್ತಷ್ಟು ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಘಟನೆ ಬಳಿಕ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸುರತ್ಕಲ್, ಮುಲ್ಕಿ, ಬಜ್ಪೆ ಮತ್ತು ಪಣಂಬೂರು ಠಾಣೆ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ಸಮಯದಲ್ಲಿ ರಾತ್ರಿ ಹತ್ತು ಗಂಟೆಯ ನಂತರ ಅನಾವಶ್ಯಕವಾಗಿ ಓಡಾಡುವ ಪ್ರತಿಯೊಂದು ವಾಹನ ಹಾಗೂ ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತದೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ಮಾಡಿ ತಪಾಸಣೆ ನಡೆಸಲಾಗುತ್ತಿದೆ. ನಗರ ಪ್ರವೇಶಿಸುವ 19 ಕಡೆಗಳಲ್ಲಿ ಚೆಕ್ ಪೋಸ್ಟ್ ಮಾಡಿ ಪ್ರತಿ ವಾಹನಗಳ ಮೇಲೆ ನಿಗಾ ವಹಿಸಲಾಗಿದೆ. ಶುಕ್ರವಾರ ದಿನಪೂರ್ತಿ ಮಂಗಳೂರು ನಗರದಾದ್ಯಂತ ಮದ್ಯದಂಗಡಿ ಬಂದ್ ಮಾಡಲು ಆದೇಶಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಂದು ಹತ್ಯೆ: ಯುವಕನ ಬರ್ಬರ ಕೊಲೆ

Last Updated : Jul 29, 2022, 9:49 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.