ಬೆಳ್ತಂಗಡಿ: ಶಿಕ್ಷಣ ಕ್ಷೇತ್ರಕ್ಕೆ ಧರ್ಮಸ್ಥಳದಿಂದ ಸತತವಾಗಿ ಸಹಕಾರ ಮತ್ತು ಪ್ರೋತ್ಸಾಹ ನೀಡುತ್ತಾ ಬರಲಾಗಿದ್ದು, ಈವರೆಗೆ ಒಟ್ಟು 17 ಕೋಟಿ ರೂ. ನೆರವು ನೀಡಲಾಗಿದೆ.
ವಿದ್ಯಾ ಸಂಸ್ಥೆಗಳಿಗೆ ಬೆಂಚು-ಡೆಸ್ಕ್ಗಳನ್ನು ತಯಾರಿಸಿ ಕೊಡಲಾಗುತ್ತಿದ್ದು, ಮರದ ಬಳಕೆ ಇಲ್ಲದೆ ಸಿಮೆಂಟ್ ಮತ್ತು ತೆಂಗಿನ ಮರದ ಕಾಂಡದಿಂದ ತಯಾರಿಸಲಾದ ಪರಿಸರ ಸ್ನೇಹಿ ಬೆಂಚು-ಡೆಸ್ಕ್ಗಳನ್ನು 1990ನೇ ಇಸವಿಯಿಂದ ಇಲ್ಲಿಯವರೆಗೆ ನೀಡಲಾಗಿದೆ. ರಾಜ್ಯದ 9,645 ಸರ್ಕಾರಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಫಾರಸಿನೊಂದಿಗೆ 17 ಕೋಟಿ ರೂ. ಮೌಲ್ಯದ ಬೆಂಚು-ಡೆಸ್ಕ್ಗಳನ್ನು ನೀಡಲಾಗಿದೆ.
ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಅಧ್ಯಾಪಕರಿಗೆ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಅಭಿನಂದನೆ ತಿಳಿಸಿ, ಈ ವರ್ಷದ ಬಜೆಟ್‍ನಲ್ಲಿ ಇದಕ್ಕಾಗಿ ಒಂದು ಕೋಟಿ ರೂ. ನಿಗದಿ ಪಡಿಸಲಾಗಿದೆ. ಕೊರೊನಾ ಮುಕ್ತ ಮುಂದಿನ ದಿನಗಳಲ್ಲಿ ಹೆಚ್ಚಿನ ಶ್ರದ್ಧೆಯಿಂದ ವಿದ್ಯಾದಾನ ಮಾಡುವಂತೆ ಸಂದೇಶ ನೀಡಿ ಎಲ್ಲರಿಗೂ ಶುಭ ಹಾರೈಸಿದ್ದಾರೆ.