ಮಂಗಳೂರು: ಪ್ರಯಾಣಿಕನೋರ್ವ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಸಾಗಿಸುತ್ತಿದ್ದ 18.80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನಿಂದ ವಿದೇಶಕ್ಕೆ ವಿಮಾನದಲ್ಲಿ ಪ್ರಯಾಣಿಸಲು ಸಿದ್ಧನಾಗಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ತಪಾಸಣೆ ನಡೆಸಿದಾಗ ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಬಳಿಕ ಆರೋಪಿ ಬಳಿಯಿದ್ದ 25 ಸಾವಿರ ಅಮೆರಿಕನ್ ಡಾಲರ್ ವಶಪಡಿಸಿಕೊಂಡಿದ್ದಾರೆ. ಇದರ ಭಾರತೀಯ ಮೌಲ್ಯ 18.80 ಲಕ್ಷ ರೂ. ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ತನಿಖೆ ಮುಂದುವರೆಸಲಾಗಿದೆ.
ಇದನ್ನೂ ಓದಿ: ಪತ್ನಿಯನ್ನು 'ಟೊಮೆಟೊ' ಎಂದು ಕರೆದಿದ್ದಕ್ಕೆ ನೆರೆ ಮನೆ ವೃದ್ಧನ ಕೊಲೆಗೈದ ಪತಿ