ಮಂಗಳೂರು : ದ.ಕನ್ನಡ ಜಿಲ್ಲೆಯಲ್ಲಿ ಇಂದು 196 ಜನರಲ್ಲಿ ಸೋಂಕು ಕಂಡು ಬಂದಿದೆ. ಇದರಲ್ಲಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಸೋಂಕಿಗೊಳಗಾದವರು 10 ಮಂದಿ, ಇಲಿ (Influenza Like Illness)ಪ್ರಕರಣದಲ್ಲಿ 91 ಮಂದಿ, ಸಾರಿ (Severe Acute Respiratory Influence) ಪ್ರಕರಣದಲ್ಲಿ 16 ಮಂದಿ, ಪ್ರಾಥಮಿಕ ಸಂಪರ್ಕದಿಂದ 20 ಮಂದಿಗೆ, ಪ್ರಸವಪೂರ್ವ ಗಂಟಲು ದ್ರವ ತಪಾಸಣೆಯಿಂದ ಇಬ್ಬರಲ್ಲಿ ಸೋಂಕು ದೃಢಗೊಂಡಿದೆ. ಅದೇ ರೀತಿ 17 ಮಂದಿಯ ಸೋಂಕಿನ ಜಾಡು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು 94 ಮಂದಿ ಗುಣಮುಖ : ಜಿಲ್ಲೆಯಲ್ಲಿ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 94 ಮಂದಿ ಇಂದು ಗುಣಮುಖರಾಗಿದ್ದಾರೆ. ಇವರ ಗಂಟಲು ದ್ರವ ಪರೀಕ್ಷೆಯಲ್ಲಿ ಎರಡು ಬಾರಿ ನೆಗೆಟಿವ್ ಎಂದು ವರದಿ ಬಂದಿರುವ ಹಿನ್ನೆಲೆ ಗುಣಮುಖರೆಂದು ಘೋಷಿಸಿ ಮನೆಗೆ ಕಳುಹಿಸಲಾಗಿದೆ.
ಈವರೆಗೆ ದ.ಕ.ಜಿಲ್ಲೆಯಲ್ಲಿ 24,741 ಮಂದಿಯ ಗಂಟಲು ದ್ರವ ತಪಾಸಣೆ ನಡೆಸಲಾಗಿದೆ. 22,511 ಮಂದಿಯ ವರದಿ ನೆಗೆಟಿವ್ ಬಂದಿದೆ. 2,230 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರಲ್ಲಿ 876 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈವರೆಗೆ 46 ಮಂದಿ ಸಾವನ್ನಪ್ಪಿದ್ದು, 1,308 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.