ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಇದರಲ್ಲಿ ನಿನ್ನೆ ಕೊರೊನಾ ಪಾಸಿಟಿವ್ ದೃಢಪಟ್ಟ ಬೋಳೂರು ಮಹಿಳೆಯ 62 ವರ್ಷ ವಯಸ್ಸಿನ ಪತಿಗೆ ಕೊರೊನಾ ದೃಢಪಟ್ಟಿದೆ. ಮತ್ತೊಬ್ಬರು ಬಂಟ್ವಾಳ ತಾಲೂಕಿನ 69 ವರ್ಷದ ಪುರುಷರಾಗಿದ್ದಾರೆ. ಇವರಿಗೆ ಕೊರೊನಾದಿಂದ ಜಿಲ್ಲೆಯಲ್ಲಿ ಸಾವನ್ನಪ್ಪಿದ ಬಂಟ್ವಾಳ ಮಹಿಳೆಯ ದ್ವಿತೀಯ ಸಂಪರ್ಕದಿಂದ ಸೋಂಕು ತಗುಲಿದೆ ಎನ್ನಲಾಗಿದೆ.
ದ.ಕ ಜಿಲ್ಲೆಯಲ್ಲಿ ಈವರೆಗೆ 24 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಇದರಲ್ಲಿ 12 ಮಂದಿ ಗುಣಮುಖರಾಗಿದ್ದಾರೆ. ಮೂವರು ಸಾವನ್ನಪ್ಪಿದ್ದು, ಒಂಭತ್ತು ಮಂದಿ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.