ETV Bharat / state

ಸುಳ್ಯ: ತಲೆಮರೆಸಿಕೊಂಡ ಆರೋಪಿಯ ಮಾಹಿತಿ ನೀಡಿದ್ರೆ ಸಿಗುತ್ತೆ 2 ಲಕ್ಷ ಬಹುಮಾನ - sulya mangalore latest news

ಅಬ್ದುಲ್ ಅಜೀಜ್ ಎಂಬ ಆರೋಪಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ತಪ್ಪಿಸಿಕೊಂಡ ಆರೋಪಿ ಬಗ್ಗೆ ಸುಳಿವು ನೀಡಿದವರಿಗೆ ಪೊಲೀಸರು ಇದೀಗ ನಗದು ಬಹುಮಾನ ಘೋಷಿಸಿದ್ದಾರೆ.

2 lakh prize for who give the detail of accused of sulya
ಸುಳ್ಯದಲ್ಲಿ ತಪ್ಪಿಸಿಕೊಂಡಿರುವ ಆರೋಪಿ ಮಾಹಿತಿ ನೀಡಿದ್ರೆ ಸಿಗುತ್ತೆ 2 ಲಕ್ಷ ರೂ. ಬಹುಮಾನ
author img

By

Published : Dec 2, 2020, 9:38 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿ ತಪ್ಪಿಸಿಕೊಂಡ ಆರೋಪಿಯ ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ನಗದು ಬಹುಮಾನವನ್ನು ಕೇರಳ ಪೊಲೀಸ್ ಮಹಾನಿರ್ದೇಶಕರು ಘೋಷಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಬ್ದುಲ್ ಅಜೀಜ್ (33) ಎಂಬ ಆರೋಪಿ ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಈತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನ್ಯಾಯಾಲಯಕ್ಕೆ ಸೆಪ್ಟೆಂಬರ್ 14 ರಂದು ಹಾಜರುಪಡಿಸಬೇಕಿತ್ತು. ಈ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.

ಓದಿ: ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ತನಿಖೆ ಚುರುಕು

ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಕೇರಳ ಪೊಲೀಸ್ ಮಹಾನಿರ್ದೇಶಕರು ಘೋಷಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.