ಪುತ್ತೂರು : ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು ಪಾಪ್ಯೂಲರ್ ಸ್ವೀಟ್ಸ್ ನೀಡಿದ್ದ ಸುಮಾರು 2 ಸಾವಿರ ಉಚಿತ ಮಾಸ್ಕ್ಗಳ ವಿತರಣಾ ಕಾರ್ಯಕ್ಕೆ ಶಾಸಕ ಸಂಜೀವ ಮಠಂದೂರು ಚಾಲನೆ ನೀಡಿದರು.
ಸಾರ್ವಜನಿಕರಿಗೆ ಮಾಸ್ಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಪ್ರಧಾನಿ ಕೊರೊನಾ ವೈರಸ್ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜನತಾ ಕರ್ಫ್ಯೂ ಜಾರಿಗೊಳಿಸಿದರು. ಇದರ ಮೂಲ ಉದ್ದೇಶ ನಾವು ಜಾಗೃತರಾಗಿರಬೇಕು. ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳಬೇಕು ಎನ್ನುವುದು. ಹಾಗಾಗಿ ಕೊರೊನಾ ಎಂಬ ಮಹಾಮಾರಿ ಒಬ್ಬರಿಂದ ಒಬ್ಬರಿಗೆ ಹರಡುವ ಗುಣಲಕ್ಷಣವನ್ನು ಅರಿತುಕೊಂಡು ನಮ್ಮನ್ನು ನಾವು ರಕ್ಷಣೆ ಮಾಡಬೇಕು ಎಂದರು.
ಪೌರಾಯುಕ್ತೆ ರೂಪಾ ಶೆಟ್ಟಿಯವರು ಮಾತನಾಡಿ, ಕೊವೀಡ್-19 ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಾನಿಗಳ ಸಹಕಾರದೊಂದಿಗೆ ನಗರಸಭೆ ವ್ಯಾಪ್ತಿಯಲ್ಲಿ ಉಚಿತವಾಗಿ ಮಾಸ್ಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸಾರ್ವಜನಿಕರು ಮುಂದಿನ ದಿನಗಳಲ್ಲಿ ಕಟ್ಟು ನಿಟ್ಟಾಗಿ ಮಾಸ್ಕ್ ಧರಿಸಬೇಕೆಂದು ವಿನಂತಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.