ETV Bharat / state

ಸುರತ್ಕಲ್​ ಯುವಕ ಫಾಜಿಲ್​ ಹತ್ಯೆ ಪ್ರಕರಣ: 21 ಮಂದಿ ಪೊಲೀಸರ​ ವಶಕ್ಕೆ

ಸುರತ್ಕಲ್​ನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣ ಸಂಬಂಧ 21 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

21-people-detained-in-surathkal-youth-murder-case
ಸುರತ್ಕಲ್​ ಯುವಕ ಫಾಜಿಲ್​ ಹತ್ಯೆ ಪ್ರಕರಣ: 21 ಮಂದಿ ಪೊಲೀಸ್​​ ವಶಕ್ಕೆ
author img

By

Published : Jul 30, 2022, 9:30 AM IST

ಮಂಗಳೂರು: ಮಂಗಳೂರಿನ ಸುರತ್ಕಲ್​ನಲ್ಲಿ ಗುರುವಾರ ಸಂಜೆ ನಡೆದ ಯುವಕನ ಹತ್ಯೆ ಪ್ರಕರಣದ ಸಂಬಂಧ 21 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುರತ್ಕಲ್​ನ ಅಂಗಡಿಯೊಂದರ ಮುಂದೆ ನಿಂತಿದ್ದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್​ ಎಂಬಾತನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಈ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಲ್ಲಿ ಮೂವರು ಆರೋಪಿಗಳು ಫಾಜಿಲ್ ಮೇಲೆ ದಾಳಿ ಮಾಡಿರುವುದು ಕಂಡುಬಂದಿತ್ತು. ದುಷ್ಕರ್ಮಿಗಳು ಕಾರಿ‌ನಲ್ಲಿ ಬಂದಿರುವುದರಿಂದ ಕಾರನ್ನು ಪತ್ತೆ ಹಚ್ಚಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇದನ್ನೂ ಓದಿ: ಸರಣಿ ಹತ್ಯೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಶಾಂತಿ ಸಭೆ ಆಯೋಜನೆ

ಈ ಪ್ರಕರಣದಲ್ಲಿ ಶನಿವಾರ ಬೆಳಗ್ಗೆವರೆಗೆ 21 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇವರೆಲ್ಲರನ್ನು ಶಂಕೆಯ ಆಧಾರದಲ್ಲಿ ವಶಕ್ಕೆ ಪಡೆದು ವಿಚಾರಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ವರುಣನ ಆರ್ಭಟ: ವಿವಿಧೆಡೆ ಇಂದು ಶಾಲೆಗೆ ರಜೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.