ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು ಹೊಸದಾಗಿ 139 ಮಂದಿಗೆ ಸೋಂಕು ದೃಢಪಟ್ಟಿದ್ದು, 211ಜನರು ಗುಣಮುಖರಾಗಿದ್ದಾರೆ.
ಇಂದಿನ ಕೋವಿಡ್ ಪ್ರಕರಣಗಳ ವಿವರ :
ಇಂದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29,540 ಕ್ಕೆ ಏರಿಕೆಯಾಗಿದೆ.
ಗುಣಮುಖ :
ಕೊರೊನಾ ಸೋಂಕಿನಿಂದ ಇಂದು ಜಿಲ್ಲೆಯಲ್ಲಿ 211 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 26,366 ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 2,541 ಸಕ್ರಿಯ ಪ್ರಕರಣಗಳಿವೆ.
ಮೃತರ ಮಾಹಿತಿ :
ಈ ದಿನ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದು, ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 663 ಕ್ಕೆ ಏರಿಕೆಯಾಗಿದೆ.
ಕೋವಿಡ್ ಪರೀಕ್ಷೆ:
ಜಿಲ್ಲೆಯಲ್ಲಿ ಈವರೆಗೆ 2,45,373 ಮಂದಿಯ ಗಂಟಲು ದ್ರವ ಮಾದರಿಯನ್ನು ತಪಾಸಣೆ ಮಾಡಲಾಗಿದ್ದು, ಅದರಲ್ಲಿ 2,15,833 ಮಂದಿಯಲ್ಲಿ ನೆಗೆಟಿವ್ ಬಂದಿದೆ.
ಮಾಸ್ಕ್ ಉಲ್ಲಂಘನೆ ಪ್ರಕರಣಗಳಿಷ್ಟು :
ಸರ್ಕಾರದ ಆದೇಶದ ಮೇರೆಗೆ ಜನಸಾಮಾನ್ಯರು ಸಾರ್ವಜನಿಕ ಸ್ಥಳಗಳಲ್ಲಿ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿದ್ದು, ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಲ್ಲಿ ದಂಡ ವಿಧಿಸಲಾಗುತ್ತದೆ. ಈವರೆಗೆ ದ.ಕ. ಜಿಲ್ಲೆಯಲ್ಲಿ ಒಟ್ಟು 9,550 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 1,08,2005 ರೂ. ದಂಡ ವಸೂಲಿ ಮಾಡಲಾಗಿದೆ.