ಮಂಗಳೂರು : ಕೊರೊನಾದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ವರು ಸಾವನ್ನಪ್ಪಿದ್ದು, 211 ಮಂದಿಯಲ್ಲಿ ಸೋಂಕು ಕಾಣಿಸಿದೆ.
ಕೊರೊನಾದಿಂದ ಸಾವನ್ನಪ್ಪಿದ 4 ಮಂದಿಯಲ್ಲಿ ಇಬ್ಬರು ಮಂಗಳೂರು ತಾಲೂಕು, ಒಬ್ಬರು ಬಂಟ್ವಾಳ ಮತ್ತು ಒಬ್ಬರು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 494ಕ್ಕೆ ಏರಿದೆ.
ಜಿಲ್ಲೆಯಲ್ಲಿ ಇಂದು 211 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇದರಲ್ಲಿ 111 ಮಂದಿ ಮಂಗಳೂರು, 43 ಬಂಟ್ವಾಳ, 17 ಪುತ್ತೂರು, 1 ಸುಳ್ಯ, 19 ಬೆಳ್ತಂಗಡಿ ಮತ್ತು 20 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20,578ಕ್ಕೆ ಏರಿದೆ.
ಜಿಲ್ಲೆಯಲ್ಲಿ ಇಂದು 209 ಮಂದಿ ಗುಣಮುಖರಾಗಿದ್ದು ಈವರೆಗೆ 15,714 ಮಂದಿ ಗುಣಮುಖರಾಗಿದ್ದಾರೆ. 4,369 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.