ETV Bharat / state

ಕೊರೊನಾ ಶಂಕೆ: ದ.ಕ.ಜಿಲ್ಲೆಯಲ್ಲಿ ಇಂದು 230 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ದ.ಕ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 10,905 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, 10,556 ಮಂದಿಯ ವರದಿ ಬಂದಿದೆ. ಆ ಪೈಕಿ 10,280 ಮಂದಿಯ ವರದಿ ನೆಗೆಟಿವ್ ಬಂದಿದ್ದು, 276 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.

Dakshina Kannada
ದ.ಕ.ಜಿಲ್ಲೆಯಲ್ಲಿ ಇಂದು 230 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ
author img

By

Published : Jun 14, 2020, 9:11 PM IST

ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆ ಮಂಗಳೂರಿನಲ್ಲಿ ಇಂದು 230 ಜನರ ಗಂಟಲು ದ್ರವದ ಸ್ಯಾಂಪಲ್ ಅ​ನ್ನು ಪರೀಕ್ಷೆಗೆ ರವಾನಿಸಲಾಗಿದೆ.

Dakshina Kannada
ಜಿಲ್ಲಾಧಿಕಾರಿಯವರ ಪ್ರಕಟಣೆ
ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 94 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಆ ಪೈಕಿ ಐವರಲ್ಲಿ ಸೋಂಕು ದೃಢ ಪಟ್ಟಿದ್ದು, 89 ಜನರ ವರದಿ ನೆಗೆಟಿವ್ ವರದಿ ಬಂದಿದೆ. 365 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 29 ಜನರು ಅಬ್ಸರ್ವೇಶನ್​ನಲ್ಲಿದ್ದಾರೆ. ಇಂದು 84 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 43,251 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.

ಈವರೆಗೆ ಜಿಲ್ಲೆಯಲ್ಲಿ 10,905 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, 10,556 ಮಂದಿಯ ವರದಿ ಬಂದಿದೆ. ಆ ಪೈಕಿ 10,280 ಮಂದಿಯ ವರದಿ ನೆಗೆಟಿವ್ ಬಂದಿದ್ದು, 276 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. 153 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದರೆ, 122 ಸಕ್ರಿಯ ಸೋಂಕಿತರು ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 8 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.