ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 234 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಈ ಪೈಕಿ, 148 ಮಂದಿ ಮಂಗಳೂರು ತಾಲೂಕು, 29 ಮಂದಿ ಬಂಟ್ವಾಳ, 14 ಮಂದಿ ಪುತ್ತೂರು, 13 ಮಂದಿ ಸುಳ್ಯ ಹಾಗು 23 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ 9,535 ಮಂದಿಗೆ ಸೋಂಕು ದೃಢಪಟ್ಟಿದೆ.
ಕೊರೊನಾದಿಂದ ಇಂದು ನಾಲ್ಕು ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಇಬ್ಬರು ಮಂಗಳೂರು ತಾಲೂಕು ಮತ್ತು ಇನ್ನಿಬ್ಬರು ಹೊರ ಜಿಲ್ಲೆಯವರಾಗಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 290ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 115 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ 6,942 ಮಂದಿ ಗುಣಮುಖರಾದಂತಾಗಿದೆ. ಇನ್ನೂ 2303 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.