ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, 237 ಜನರ ವರದಿ ಪಾಸಿಟಿವ್ ಬಂದಿದೆ.
ಜಿಲ್ಲೆಯಲ್ಲಿ ಸಾವನ್ನಪ್ಪಿದವರಲ್ಲಿ ಮೂವರು ಮಂಗಳೂರು ತಾಲೂಕಿನವರಾಗಿದ್ದು, ಒಬ್ಬರು ಪುತ್ತೂರು ತಾಲೂಕಿನವರಾಗಿದ್ದಾರೆ. ಪುತ್ತೂರಿನ 74 ವರ್ಷದ ಮಹಿಳೆ, ಮಂಗಳೂರಿನ 67 ವರ್ಷದ ಪುರುಷ, 49 ಮತ್ತು 61 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 75 ಕ್ಕೆ ಏರಿಕೆಯಾಗಿದೆ. ಇಂದು 237 ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ 3,311 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇಂದು 109 ಮಂದಿ ಗುಣಮುಖರಾಗಿದ್ದು, ಈವರೆಗೆ 1,387 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂಸ ಡಿಸ್ಚಾರ್ಜ್ ಆಗಿದ್ದಾರೆ. 1,848 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.