ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು 6 ಮಂದಿ ಸಾವನ್ನಪ್ಪಿದ್ದು, ಕೊರೊನಾಗೆ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 574ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 245 ಮಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿದೆ. ಈವರೆಗೆ 24,557 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಂದು 261 ಮಂದಿ ಸೋಂಕಿತರು ಸೇರಿ ಈವರೆಗೆ 18,404 ಮಂದಿ ಗುಣಮುಖರಾಗಿದ್ದಾರೆ. ಸದ್ಯ 5579 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 1,71,996 ಮಂದಿಯ ತಪಾಸಣೆ ನಡೆಸಲಾಗಿದ್ದು ಇದರಲ್ಲಿ 1,47,439 ಮಂದಿಯ ರಿಪೋರ್ಟ್ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 4860 ಮಾಸ್ಕ್ ಉಲ್ಲಂಘನೆ ಪ್ರಕರಣ ಪತ್ತೆಯಾಗಿದ್ದು, 5,85,825ರೂ. ದಂಡ ವಸೂಲಿ ಮಾಡಲಾಗಿದೆ.