ETV Bharat / state

ದ.ಕ ಜಿಲ್ಲೆಯಲ್ಲಿ ಕೊರೊನಾಗೆ 6 ಬಲಿ.....246 ಮಂದಿಗೆ ಸೋಂಕು ದೃಢ! - Mangalore latest news

ಜಿಲ್ಲೆಯಲ್ಲಿಂದು 246 ಕೋವಿಡ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು 6 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 8071ಕ್ಕೆ ಮತ್ತು ಮೃತರ ಸಂಖ್ಯೆ 250ಕ್ಕೆ ಏರಿಕೆಯಾಗಿದೆ.

Dakshina Kannada covid case
Dakshina Kannada covid case
author img

By

Published : Aug 13, 2020, 7:42 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು 6 ಮಂದಿ ಕೊನೆಯುಸಿರೆಳೆದಿದ್ದಾರೆ. ಮತ್ತು 246 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂದು ಸಾವನ್ನಪ್ಪಿದ 6 ಮಂದಿಯಲ್ಲಿ 3 ಮಂದಿ ಮಂಗಳೂರು ತಾಲೂಕಿನವರಾದರೆ, ಬಂಟ್ವಾಳ ತಾಲೂಕಿನ ಒಬ್ಬರು ಮತ್ತು ಇಬ್ಬರು ಹೊರಜಿಲ್ಲೆಯವರಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದವರ ಸಂಖ್ಯೆ 250ಕ್ಕೆ ಏರಿಕೆಯಾಗಿದೆ.

ಇನ್ನೂ ಮಂಗಳೂರು ತಾಲೂಕಿನಲ್ಲಿ 150, ಬಂಟ್ವಾಳದಲ್ಲಿ 47, ಪುತ್ತೂರಿನಲ್ಲಿ 16, ಸುಳ್ಯದಲ್ಲಿ 7, ಬೆಳ್ತಂಗಡಿಯಲ್ಲಿ 15 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಜೊತೆಗೆ ಹೊರಜಿಲ್ಲೆಯ 11 ಮಂದಿಗೆ ಸೋಂಕು ತಗುಲಿದ್ದು ಸೋಂಕಿತರ ಸಂಖ್ಯೆ 8071ಕ್ಕೆ ತಲುಪಿ‌ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಇಂದು ಒಂದೇ ದಿನ 641 ಮಂದಿ ಗುಣಮುಖರಾಗಿದ್ದು, ಈವರೆಗೆ ಸೋಂಕಿನಿಂದ ಸಂಪೂರ್ಣ ಗುಣಮುಖರಾದವರ ಸಂಖ್ಯೆ 5873ಕ್ಕೆ ಏರಿಕೆಯಾಗಿದೆ. ಸದ್ಯ 1948 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.