ETV Bharat / state

ಕೊರೊನಾ ಶಂಕೆ: ಮಂಗಳೂರಲ್ಲಿ 25 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - ಕೊರೊನಾ ಭೀತಿ : 25 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ..!

ಮಂಗಳೂರಿನಲ್ಲಿ 25 ಮಂದಿ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

25 people's throat fluid  sent for corona testing
25 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ..!
author img

By

Published : Mar 28, 2020, 6:37 PM IST

ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ನಗರದಲ್ಲಿಂದು 25 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಹಿಂದೆ ಕಳುಹಿಸಲಾದ 15 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿ ಬಂದಿದ್ದು, ಇದರಲ್ಲಿ ಯಾವುದೇ ಪಾಸಿಟಿವ್​ ಪ್ರಕರಣ ಪತ್ತೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೃಢಪಟ್ಟವರು 7 ಮಂದಿ ಇದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಕೂಡ 94 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,209 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್​​​ನಲ್ಲಿ 3164 ಮಂದಿ ಇದ್ದು, 29 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​​​ನಲ್ಲಿ ಇದ್ದಾರೆ. ಇಂದಿಗೆ 20 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ.

25 people's throat fluid  sent for corona testing
25 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಜಿಲ್ಲೆಯಲ್ಲಿ ಇಂದು 6 ಮಂದಿಯನ್ನು ಆಸ್ಪತ್ರೆ ಗೆ ದಾಖಲಿಸಲಾಗಿದ್ದು, ತೀವ್ರ ನಿಗಾದಲ್ಲಿ ಇಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.