ಮಂಗಳೂರು: ದ.ಕ.ಜಿಲ್ಲೆಯಲ್ಲಿ ಹೊಸದಾಗಿ 265 ಜನರಿಗೆ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26 ಸಾವಿರ ಗಡಿ ದಾಟಿದೆ.
ಇಂದಿನ ಕೋವಿಡ್ ಪ್ರಕರಣಗಳಿಷ್ಟು :
ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣ ಸಂಖ್ಯೆ 26,529 ಕ್ಕೆ ಏರಿಕೆಯಾಗಿದೆ.
ಮೃತರ ಮಾಹಿತಿ :
ಈ ದಿನ ಕೊರೊನಾಗೆ ಐವರು ಬಲಿಯಾಗಿದ್ದು, ಇದುವರೆಗೆ ಸೋಂಕಿಗೆ 605 ಜನರು ಸಾವನ್ನಪ್ಪಿದ್ದಾರೆ. ಇನ್ನು ಜಿಲ್ಲೆಯಲ್ಲಿ 4,180 ಸಕ್ರಿಯ ಪ್ರಕರಣಗಳಿವೆ.
ಗುಣಮುಖ :
ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 283 ಮಂದಿ ಗುುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 21,744 ಜನರು ಗುಣಮುಖರಾದಂತಾಗಿದೆ
ಕೋವಿಡ್ ಪರೀಕ್ಷಾ ವಿವರ :
ಜಿಲ್ಲೆಯಲ್ಲಿ ಈವರೆಗೆ 1,97,582 ಮಂದಿಯ ಗಂಟಲು ದ್ರವ ಮಾದರಿಯನ್ನು ತಪಾಸಣೆ ಮಾಡಲಾಗಿದ್ದು, ಅದರಲ್ಲಿ 1,71,053 ಮಂದಿಯಲ್ಲಿ ನೆಗೆಟಿವ್ ಬಂದಿದೆ.