ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 9 ಮಂದಿ ಸಾವನ್ನಪ್ಪಿದ್ದು 279 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟ 9 ಮಂದಿಯಲ್ಲಿ 3 ಮಂದಿ ಮಂಗಳೂರು ತಾಲೂಕು, ಒಬ್ಬರು ಬಂಟ್ವಾಳ ತಾಲೂಕು ಮತ್ತು 5 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 286ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 279 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ ಮಂಗಳೂರು ತಾಲೂಕಿನ 163 , ಬಂಟ್ವಾಳ ತಾಲೂಕಿನ 49, ಪುತ್ತೂರು ತಾಲೂಕಿನ 25, ಸುಳ್ಯ ತಾಲೂಕಿನ 10, ಬೆಳ್ತಂಗಡಿ ತಾಲೂಕಿನ 15 ಮತ್ತು ಹೊರಜಿಲ್ಲೆಯ 17 ಮಂದಿಗೆ ಕೊರೊನಾ ದೃಢಪಟ್ಟಿದೆ. ಈವರೆಗೆ 9,301 ಮಂದಿಗೆ ಕೊರೊನಾ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇಂದು 173 ಮಂದಿ ಗುಣಮುಖರಾಗಿದ್ದು ಈವರೆಗೆ 6,827 ಮಂದಿ ಗುಣಮುಖರಾಗಿದ್ದಾರೆ. 2188 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.