ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನ ಮೂವರು ಸೋಂಕಿತರು ಮೃತಪಟ್ಟಿದ್ದಾರೆ.
ಮುಂಜಾನೆ ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಮಂಗಳೂರಿನ ನಿವಾಸಿಯಾದ 72 ವರ್ಷದ ವೃದ್ಧ ಮತ್ತು ಉತ್ತರ ಕನ್ನಡ ಜಿಲ್ಲೆಯ 31 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
76 ವರ್ಷದ ವೃದ್ಧ ಮಧ್ಯಾಹ್ನದ ಬಳಿಕ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಡಯಾಬಿಟಿಸ್, ಅಧಿಕ ರಕ್ತದೊತ್ತಡ, ಶ್ವಾಸಕೋಶದ ಕಾಯಿಲೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದರು.
ಒಟ್ಟಾರೆ ಇಂದು ಒಂದೇ ದಿನ 3 ಮಂದಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.