ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಸಬಾ ಗ್ರಾಮದ ಒಂದೇ ಕುಟುಂಬದ ಮೂವರಿಗೆ ಕೊರೊನಾ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಬಂಟ್ವಾಳ ಕಸಬಾ ಗ್ರಾಮದ 70 ವರ್ಷದ ಮಹಿಳೆ, 60 ವರ್ಷದ ಮಹಿಳೆ ಮತ್ತು 30 ವರ್ಷದ ಪುರುಷನಿಗೆ ಕೊರೊನಾ ದೃಢಪಟ್ಟಿದೆ. ಇವರೆಲ್ಲರೂ ಒಂದೇ ಮನೆಯವರಾಗಿದ್ದಾರೆ. ಇವರಿಗೆ ಮೇ 1 ರಂದು 69 ವರ್ಷದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ ಕೊರೊನಾ ಖಚಿತವಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 31 ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 15 ತಲುಪಿದೆ. ಈಗಾಗಲೇ ಮೂವರು ಸಾವನ್ನಪ್ಪಿದ್ದು, 13 ಮಂದಿ ಗುಣಮುಖರಾಗಿದ್ದಾರೆ.