ಮಂಗಳೂರು: ಬೆಳ್ತಂಗಡಿ ತಾಲೂಕಿನ ಅರಣ್ಯ ಇಲಾಖೆಯ ಗೋದಾಮಿನಿಂದ 350 ಕೆ.ಜಿ. ಗಂಧ ಕಳುವಾದ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿಯ ಸಂತೆಕಟ್ಟೆ ಜೂನಿಯರ್ ಕಾಲೇಜಿನ ಬಳಿ ಕಾರ್ಯಾಚರಿಸುತ್ತಿರುವ ಅರಣ್ಯ ಇಲಾಖೆಯಲ್ಲಿ ಸುಮಾರು 12 ಲಕ್ಷ ರೂ. ಮೌಲ್ಯದ 350 ಕೆ.ಜಿ. ಗಂಧ ಕಳುವಾಗಿರುವ ಬಗ್ಗೆ ದೂರು ದಾಖಲಾಗಿದೆ. ಪ್ರತಿದಿನವೂ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಅರಣ್ಯ ಇಲಾಖೆಯ ಓರ್ವ ಸಿಬ್ಬಂದಿ ಇದ್ದರೂ, ಪ್ರಕರಣ ನಡೆದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಆದ್ದರಿಂದ ಮೇಲ್ನೋಟಕ್ಕೆ ಇಲ್ಲಿ ಕರ್ತವ್ಯ ಲೋಪ ಎದ್ದು ಕಾಣುತ್ತಿದೆ.
ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ, ರೇಂಜರ್ ಸುಬ್ಬಯ್ಯ ನಾಯ್ಕ್, ಉಪ್ಪಿನಂಗಡಿ ರೇಂಜರ್ ಸಂಧ್ಯಾ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.