ETV Bharat / state

37 ಲಕ್ಷ ಮೌಲ್ಯದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ಕಸ್ಟಮ್​ ಅಧಿಕಾರಿಗಳ ವಶಕ್ಕೆ - ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ

ಗುದನಾಳದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಪ್ರಯಾಣಿಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

37-lakhs-worth-of-gold-seized-at-mangaluru-airport
37 ಲಕ್ಷ ಮೌಲ್ಯದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ಕಸ್ಟಮ್​ ಅಧಿಕಾರಿಗಳ ವಶಕ್ಕೆ
author img

By

Published : May 18, 2022, 1:46 PM IST

ಮಂಗಳೂರು: ಗುದನಾಳದಲ್ಲಿ ಭಾರಿ ಪ್ರಮಾಣದ ಚಿನ್ನ ಬಚ್ಚಿಟ್ಟು ಸಾಗಿಸುತ್ತಿದ್ದ ಪ್ರಯಾಣಿಕನನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಚಿನ್ನವನ್ನು ಪೇಸ್ಟ್ ರೂಪದಲ್ಲಿ ಪರಿವರ್ತಿಸಿ ಸಾಗಾಟ ಮಾಡಲಾಗುತ್ತಿತ್ತು.

ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪ್ರಯಾಣಿಕ ಉಡುಪಿ ಜಿಲ್ಲೆಯ ಬೈಂದೂರಿನವನಾಗಿದ್ದಾನೆ. ಮೇ 16ರಂದು ಈತ ಬಹರೈನ್​ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ಈತನನ್ನು ತಪಾಸಣೆ ನಡೆಸಿದಾಗ 24 ಕ್ಯಾರೆಟ್​​ನ 736 ಗ್ರಾಂ ಚಿನ್ನ ಕಳ್ಳಸಾಗಣೆ ಪತ್ತೆಯಾಗಿದೆ.

ಚಿನ್ನದ ಮೌಲ್ಯ 37,16,800 ರೂ. ಎಂದು ಅಂದಾಜಿಸಲಾಗಿದೆ. ಪ್ರಯಾಣಿಕ ಮತ್ತು ಚಿನ್ನವನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಶೀನಾ ಬೋರಾ ಹತ್ಯೆ ಕೇಸ್‌: ಪ್ರಮುಖ ಆರೋಪಿ, ತಾಯಿ ಇಂದ್ರಾಣಿ ಮುಖರ್ಜಿಗೆ ಜಾಮೀನು

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.