ಮಂಗಳೂರು: ಗುದನಾಳದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಕಾಸರಗೋಡು ಮೂಲದ ಪ್ರಯಾಣಿಕ ಇಂದು ದುಬೈಯಿನಿಂದ ಮಂಗಳೂರಿಗೆ ಆಗಮಿಸಿದ್ದನು. ಈತನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದಾಗ ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಸಾಗಾಟ ಮಾಡುವುದು ಪತ್ತೆಯಾಗಿದೆ. ಪ್ರಯಾಣಿಕನಿಂದ 24 ಕ್ಯಾರೆಟ್ ಶುದ್ಧತೆಯ 741 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 38,53,200 ರೂ ಎಂದು ಅಂದಾಜಿಸಲಾಗಿದೆ. ಪ್ರಯಾಣಿಕನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಗುದನಾಳದಲ್ಲಿ ಚಿನ್ನ ಬಚ್ಚಿಟ್ಟು ಕಳ್ಳ ಸಾಗಣಿಕೆ: ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಚಾಲಾಕಿ