ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 384 ಮಂದಿಯ ಗಂಟಲು ದ್ರವದ ಸ್ಯಾಂಪಲ್ಅನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 329 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 328 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು, ಓರ್ವನಿಗೆ ಸೋಂಕು ದೃಢ ಪಟ್ಟಿದೆ.
ಇನ್ನು 639 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 19 ಮಂದಿ ಅಬ್ಸರ್ವೇಷನ್ನಲ್ಲಿದ್ದಾರೆ. 18 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್ನಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, 48 ಮಂದಿಯನ್ನು ಸುರತ್ಕಲ್ನ ಎನ್ಐಟಿಕೆಯಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ವೆನ್ಲಾಕ್ ಆಸ್ಪತ್ರೆಯ ಕ್ವಾರೆಂಟೈನ್ನಲ್ಲಿ ಯಾರೂ ಇಲ್ಲ. 6,073 ಮಂದಿ 28 ದಿನಗಳ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ. ಇಂದು 67 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈವರೆಗೆ 42,078 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.
ಇವರೆಗೆ 6,887 ಮಂದಿಯ ಗಂಟಲು ದ್ರವ ಪಡೆಯಲಾಗಿದೆ. ಆ ಪೈಕಿ 6,248 ಮಂದಿಯ ವರದಿ ಬಂದಿದ್ದು, ಅದರಲ್ಲಿ 6,182 ಮಂದಿಯ ವರದಿಯಲ್ಲಿ ನೆಗೆಟಿವ್ ಬಂದಿದೆ. 66 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 26 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು 34 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 6 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.