ETV Bharat / state

ಮಂಗಳೂರು: ಕಟ್ಟಡ ತ್ಯಾಜ್ಯ ಫುಟ್ ಪಾತ್​ನಲ್ಲಿ ಎಸೆದವನಿಗೆ ಮಹಾನಗರ ಪಾಲಿಕೆಯಿಂದ 4 ಸಾವಿರ ರೂ. ದಂಡ

ಮಂಗಳೂರು ನಗರದಲ್ಲಿ ಕಟ್ಟಡ ತ್ಯಾಜ್ಯವನ್ನು ಎಸೆದಾತನಿಗೆ ಮಹಾನಗರ ಪಾಲಿಕೆ 4,000 ರೂ.ಗಳ ದಂಡ ವಿಧಿಸಿದೆ.

ಕಟ್ಟಡ ತ್ಯಾಜ್ಯ-ಫುಟ್ ಪಾತ್​ನಲ್ಲಿ ಎಸೆತ
ಕಟ್ಟಡ ತ್ಯಾಜ್ಯ-ಫುಟ್ ಪಾತ್​ನಲ್ಲಿ ಎಸೆತ
author img

By ETV Bharat Karnataka Team

Published : Aug 24, 2023, 2:41 PM IST

ಮಂಗಳೂರು(ದಕ್ಷಿಣ ಕನ್ನಡ): ನಗರದ ಮಣ್ಣಗುಡ್ಡ ಪ್ರದೇಶದಲ್ಲಿ ಫುಟ್​​​ ಪಾತ್​ನಲ್ಲಿ ಕಟ್ಟಡ ತ್ಯಾಜ್ಯವನ್ನು ಎಸೆದ ಪ್ರಕರಣದಲ್ಲಿ ಮಂಗಳೂರು ಮಹಾನಗರ ಪಾಲಿಕೆ ದಂಡ ವಿಧಿಸಿದೆ. ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂ.ಗಳ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಿದೆ.

ಪ್ರಶಾಂತ್ ಶೇಟ್ ಎಂಬವರಿಂದ ಕಟ್ಟಡ ತ್ಯಾಜ್ಯವನ್ನು ಫುಟ್ ಪಾತ್​ನಲ್ಲಿ ಹಾಕಿದ ಕಾರಣ ಸ್ವಚ್ಛತಾ ದರ ಎಂದು ಮಂಗಳೂರು ಮಹಾನಗರ ಪಾಲಿಕೆ ರೂ. 4 ಸಾವಿರ ದಂಡ ವಸೂಲು ಮಾಡಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಛತೆಗೆ ಧಕ್ಕೆ ಉಂಟಾಗುತ್ತಿದೆ. ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸೌಂದರ್ಯಕ್ಕೆ ಹಾಗೂ ಸ್ವಚ್ಛತೆಗೆ ಧಕ್ಕೆ ತರುವವರ ವಿರುದ್ಧ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.

ಇನ್ನು ಮುಂದೆ ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

ಪ್ರತ್ಯೇಕ ಪ್ರಕರಣ- ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿ ಅರೆಸ್ಟ್-ಎರಡು ವಾಹನಗಳು ವಶಕ್ಕೆ: ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಎರಡು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳ್ಳಾಲದ ತೊಕ್ಕೊಟ್ಟು, ಕಾಫಿಕಾಡ್ 1 ನೇ ಕ್ರಾಸ್ ನಿವಾಸಿ ಶನೀಝ್ (23) ಬಂಧಿತ ಆರೋಪಿ.

ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳು ಕಳ್ಳತನವಾಗಿದ್ದವು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಈ ವಾಹನಗಳ ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಆರೋಪಿ ಶನೀಝ್ ಕಳವು ಮಾಡಿದ ಸ್ಕೂಟರ್​ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ನಗರದ ಪಂಪುವೆಲ್ ಬ್ರಿಡ್ಜ್ ಬಳಿ ಆತನನ್ನು ದಸ್ತಗಿರಿ ಮಾಡಿ ಆತನ ವಶದಲ್ಲಿದ್ದ ಕಳವು ಮಾಡಿದ್ದ ಸ್ಕೂಟರನ್ನು ಹಾಗೂ ಈ ಹಿಂದೆ ಈತನು ಕಳವು ಮಾಡಿದ್ದ ಮತ್ತೊಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.

ಆತನಿಂದ ಸುಮಾರು 1.10 ಲಕ್ಷ ರೂ. ಮೌಲ್ಯದ 2 ದ್ವಿಚಕ್ರ ವಾಹನಗಳನ್ನು ಮಂಗಳೂರು ಪೂರ್ವ ಪೊಲೀಸ್​ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Moral policing: ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್​ಗಿರಿ.. ಮೂವರು ಆರೋಪಿಗಳ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.