ಮಂಗಳೂರು: ಜಿಲ್ಲೆಯಲ್ಲಿ ಇಂದು ನಡೆದ ಎಸ್ಎಸ್ಎಲ್ ಸಿ ಗಣಿತ ಪರೀಕ್ಷೆಗೆ 419 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಇಂದಿನ ಪರೀಕ್ಷೆಗೆ ಜಿಲ್ಲೆಯಲ್ಲಿ 28,287 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ ಒಟ್ಟು 27,868 ವಿದ್ಯಾರ್ಥಿಗಳು ಹಾಜರಾಗಿದ್ದು, 419 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕೋವಿಡ್ ಸೋಂಕಿನ ಭೀತಿಯಿಂದ ಸಾಕಷ್ಟು ಮುಂಜಾಗ್ರತೆಯಿಂದ ಪರೀಕ್ಷೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ ಜ್ವರ, ಶೀತ, ನೆಗಡಿ ಮತ್ತಿತರ ಸೋಂಕಿನ ಲಕ್ಷಣ ಉಳ್ಳವರಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.