ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 466 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ರಾಜ್ಯ ಹೆಲ್ತ್ ಬುಲೆಟಿನ್ನಲ್ಲಿ ಮಾಹಿತಿ ನೀಡಲಾಗಿದೆ.
ರಾಜ್ಯ ಬುಲೆಟಿನ್ ಮಾಹಿತಿಯಂತೆ ಇಂದು ಜಿಲ್ಲೆಯಲ್ಲಿ 466 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಸೋಂಕಿತರ ಸಂಖ್ಯೆ 18,558 ಕ್ಕೆ ಏರಿಕೆಯಾಗಿದೆ.
ಇಂದು ಗುಣಮುಖರಾದವರ ಮತ್ತು ಸಾವಿಗೀಡಾದವರ ಮಾಹಿತಿ ನೀಡಲಾಗಿಲ್ಲ. ಈವರೆಗೆ 13,608 ಮಂದಿ ಗುಣಮುಖರಾಗಿದ್ದು, 451 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 4,499 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸರ್ಕಾರಿ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇಂದು ಬುಲೆಟಿನ್ ಪ್ರಕಟವಾಗಿಲ್ಲ.