ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 11 ವರ್ಷದ ಬಾಲಕಿ ಸೇರಿದಂತೆ ಐವರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
![5 corona infected people cured](https://etvbharatimages.akamaized.net/etvbharat/prod-images/7631050_542_7631050_1592236436233.png)
ಇವರಲ್ಲಿ ಓರ್ವ ಬಾಲಕಿ ಸೇರಿದಂತೆ ನಾಲ್ವರು ಪುರುಷರು ಸೇರಿದ್ದಾರೆ. ಇಬ್ಬರು 20 ಹಾಗೂ 25 ವಯಸ್ಸಿನ ಯುವಕರು ಮತ್ತು 43 ಹಾಗೂ 52 ವಯಸ್ಸಿನ ಮಧ್ಯ ವಯಸ್ಕರಾಗಿದ್ದಾರೆ. ಇವರು ಮುಂದೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ನಲ್ಲಿ ಇರಲಿದ್ದಾರೆ. ಇನ್ನು ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 83 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 170 ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿ ಬಂದಿದೆ. ಅದರಲ್ಲಿ 23 ಜನರಲ್ಲಿ ಸೋಂಕು ದೃಢಪಟ್ಟಿದ್ದು, 147 ಮಂದಿಯ ವರದಿ ನೆಗೆಟಿವ್ ಬಂದಿದೆ. 277 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 28 ಮಂದಿ ಅಬ್ಸರ್ವೇಷನ್ನಲ್ಲಿದ್ದಾರೆ. ಇಂದು 174 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈವರೆಗೆ 45,295 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.
ಈವರೆಗೆ 10,985 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, ಈವರೆಗೆ 10,721 ಮಂದಿಯ ವರದಿ ಬಂದಿದೆ. ಅದರಲ್ಲಿ 10,422 ಮಂದಿಯ ವರದಿ ನೆಗೆಟಿವ್ ಬಂದಿದೆ. 299 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 158 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಉಳಿದಂತೆ 123 ಮಂದಿ ಸಕ್ರಿಯ ಸೋಂಕಿತರು ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 8 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.