ETV Bharat / state

ದ.ಕ. ಜಿಲ್ಲೆಯಲ್ಲಿ ಬಾಲಕಿ ಸಹಿತ ಐವರು ಕೊರೊನಾ ಸೋಂಕಿತರು ಗುಣಮುಖ - Mangalore latest news

ಮಂಗಳೂರಿನಲ್ಲಿ ಇಂದು 151 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 130 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 17 ಜನರಲ್ಲಿ ಸೋಂಕು ದೃಢಗೊಂಡಿದ್ದು, 113 ಜನರ ವರದಿ ನೆಗೆಟಿವ್ ಬಂದಿದೆ.

author img

By

Published : Jun 7, 2020, 8:51 PM IST

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 13 ವರ್ಷದ ಬಾಲಕಿ ಸಹಿತ ಐವರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇವರು 14 ದಿನಗಳ ಹೋಮ್ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ.

ಮಂಗಳೂರಿನಲ್ಲಿ ಇಂದು 151 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 130 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 17 ಜನರಲ್ಲಿ ಸೋಂಕು ದೃಢಗೊಂಡಿದ್ದು, 113 ಜನರ ವರದಿ ನೆಗೆಟಿವ್ ಬಂದಿದೆ. 21 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 11 ಮಂದಿ ಮೇಲೆ ನಿಗಾವಹಿಸಲಾಗಿದೆ. ಮಂಗಳೂರಿನ ಇಎಸ್ಐ ಹಾಸ್ಪಿಟಲ್, ಸುರತ್ಕಲ್ ನ ಎನ್ಐಟಿಕೆ ಹಾಗೂ ವೆನ್ಲಾಕ್ ಆಸ್ಪತ್ರೆಯ ಕ್ವಾರೆಂಟೈನ್ ನಲ್ಲಿ ಯಾರೂ ಇಲ್ಲ.

ಇಂದು 20 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈ ವರೆಗೆ 42,887 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ. ಈ ವರೆಗೆ 9,539 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, 9,518 ಮಂದಿಯ ವರದಿ ಬಂದಿದೆ. ಅದರಲ್ಲಿ 9,326 ಮಂದಿಯ ವರದಿ ನೆಗೆಟಿವ್ ಬಂದಿದೆ. 192 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 96 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

89 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.