ETV Bharat / state

ಗಾಂಜಾ ಸಾಗಾಟ ಮಾಡುತ್ತಿದ್ದ 7 ಮಂದಿ ಸೆರೆ: 3 ವಾಹನಗಳ ಸಹಿತ 44 ಕೆ.ಜಿ ಗಾಂಜಾ ವಶ

ಮಂಗಳೂರಿನಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಬೀದರ್ ಹಾಗೂ ತೆಲಂಗಾಣ ರಾಜ್ಯದಿಂದ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ‌ ಸಿಸಿಬಿ ಪೊಲೀಸರು ಉಳ್ಳಾಲ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದರು.

ಗಾಂಜಾ ಸಾಗಾಟ
ಗಾಂಜಾ ಸಾಗಾಟ
author img

By

Published : Jan 22, 2021, 4:38 PM IST

ಮಂಗಳೂರು: ನಗರಕ್ಕೆ ಬೀದರ್ ಹಾಗೂ ತೆಲಂಗಾಣದಿಂದ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಏಳು ಮಂದಿ‌ ಆರೋಪಿಗಳನ್ನು ಬಂಧಿಸಿದ ಪೊಲೀಸರು 2 ಕಾರು, 1 ದ್ವಿಚಕ್ರ ವಾಹನ ಸಹಿತ 44 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮಂಗಳೂರಿನ ಬಂಟ್ವಾಳ ತಾಲೂಕಿನ ನರಿಂಗಾನ ತೌಡುಗೋಳಿ ನಿವಾಸಿಗಳಾದ ಅಬ್ದುಲ್ ಅಜೀಜ್(40), ಮೊಹಮ್ಮದ್ ಹಫೀಝ್(23), ಮೊಯ್ದೀನ್ ಹಫೀಸ್ (34), ಗುರುಪುರ, ಗುರುನಗರ ನಿವಾಸಿ ಸಂದೀಪ್(34), ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಮನೂರ್ ಮಂಡಲ್ ಗ್ರಾಮ ನಿವಾಸಿ ವಿಠಲ್ ಚವ್ಹಾಣ(35), ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ದಂಡೆ ಕೋಸಮ್ ಗ್ರಾಮದ ಕಲ್ಲಪ್ಪ(40), ಬಾಲ್ಕಿ ತಾಲೂಕಿನ ಸೇವಾನಗರ ತಾಂಡಾದ ಸಂಜು ಕುಮಾರ್ (34) ಬಂಧಿತ ಆರೋಪಿಗಳು.

ನಗರ ಪೊಲೀಸ್ ಆಯುಕ್ತ ಶಶಿಕುಮಾರ್.ಎನ್ ಮಾಹಿತಿ

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್.ಎನ್ ಮಾತನಾಡಿ, ಮಂಗಳೂರಿನಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಬೀದರ್ ಹಾಗೂ ತೆಲಂಗಾಣ ರಾಜ್ಯದಿಂದ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ‌ ಸಿಸಿಬಿ ಪೊಲೀಸರು ಉಳ್ಳಾಲ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ.

ಬಂಧಿತರಿಂದ ಒಟ್ಟು 9.75 ಲಕ್ಷ ರೂ. ಮೌಲ್ಯದ ಗಾಂಜಾ ಸಹಿತ ಮಾರುತಿ ಸ್ವಿಫ್ಟ್ ಕಾರು, ಹುಂಡೈ ವರ್ನಾ ಕಾರು, ಸ್ಕೂಟರ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸೊತ್ತಿನ ಒಟ್ಟು ಮೌಲ್ಯ 23.25 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಎಂದರು.

ಆರೋಪಿಗಳ ಪೈಕಿ ಅಜೀಜ್ ಎಂಬಾತನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ 3, ಕಾವೂರು ಹಾಗೂ ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ತಲಾ ಒಂದೊಂದು ಗಾಂಜಾ ಪ್ರಕರಣಗಳು ದಾಖಲಾಗಿವೆ. ಮೊಯ್ದೀನ್ ಹಫೀಸ್ ವಿರುದ್ಧ ಕೊಣಾಜೆ, ಸುರತ್ಕಲ್, ಉಳ್ಳಾಲ, ಕಂಕನಾಡಿ ಪೊಲೀಸ್ ಠಾಣೆಗಳಲ್ಲಿ ಆರು ಗಾಂಜಾ ಪ್ರಕರಣಗಳು ದಾಖಲಾಗಿವೆ. ಈತನಿಗೆ ಕೊಣಾಜೆ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆಯನ್ನು ವಿಧಿಸಿತ್ತು. ಸಂಜೀವ್ ಕುಮಾರ್ ಚವ್ಹಾಣ ಹಾಗೂ ಕಲ್ಲಪ್ಪರ ವಿರುದ್ಧ ಆಂಧ್ರಪ್ರದೇಶದಲ್ಲಿ ಗಾಂಜಾ ಪ್ರಕರಣ ದಾಖಲಾಗಿದೆ. ವಿಠಲ್ ಚವ್ಹಾಣ ವಿರುದ್ಧ ಆಂಧ್ರಪ್ರದೇಶದ ಮನೂರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.