ETV Bharat / state

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ - Rape case against a minor girl

ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಎಂಬಾತನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಅತ್ಯಾಚಾರ ಅಪರಾಧಕ್ಕೆ ಏಳು ವರ್ಷ ಕಠಿಣ ಸಜೆ ಮತ್ತು ಐದು ಸಾವಿರ ರೂ. ದಂಡ ಹಾಗೂ ಪೊಕ್ಸೋ ಕಾಯಿದೆಯ ಕಲಂನಡಿ ಹತ್ತು ವರ್ಷ ಕಠಿಣ ಶಿಕ್ಷೆ ಮತ್ತು ಐದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

minor girl rape case
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ
author img

By

Published : Sep 15, 2021, 4:51 AM IST

ಮಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣವಾಗಿದ್ದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು (ಪೊಕ್ಸೋ) ಶಿಕ್ಷೆ ಪ್ರಕಟಿಸಿದೆ.

ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಎಂಬಾತನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಅತ್ಯಾಚಾರ ಅಪರಾಧಕ್ಕೆ ಏಳು ವರ್ಷ ಕಠಿಣ ಸಜೆ ಮತ್ತು ಐದು ಸಾವಿರ ರೂ. ದಂಡ ಹಾಗೂ ಪೊಕ್ಸೋ ಕಾಯಿದೆಯ ಕಲಂನಡಿ ಹತ್ತು ವರ್ಷ ಕಠಿಣ ಶಿಕ್ಷೆ ಮತ್ತು ಐದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ನವೀನ್ ತನ್ನದೇ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ ದೂರು ದಾಖಲಾಗಿತ್ತು. ಬಾಲಕಿ ಅತ್ಯಾಚಾರ ಪ್ರಕರಣದ ಬಗ್ಗೆ 2019ರ ಜೂ.27ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿ ಅತ್ಯಾಚಾರವೆಸಗಿದ ಪರಿಣಾಮ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿ ಬಳಿಕ ಗರ್ಭಪಾತವಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪ್ರೊಬೆಷನರಿ ಡಿವೈಎಸ್ಪಿ, ಪ್ರಭಾರ ವೃತ್ತನಿರೀಕ್ಷಕ ಗೋವಿಂದ ರಾಜು ಬಿ. ಅವರು ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್ ಅವರು ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಶಿಕ್ಷೆ ಪ್ರಕಟಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.