ಮಂಗಳೂರು: ಜಿಲ್ಲೆಯಲ್ಲಿ ಇಂದು ಎಂಟು ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದ ಏಳು ಜನರಿಗೆ ಕೊರೊನಾ ತಗುಲಿದ್ದು, ಮತ್ತೊಬ್ಬರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಮಹಾರಾಷ್ಟ್ರದಿಂದ ಬಂದ 58, 36, 52, 24, 48, 43, 43 ವರ್ಷದ ಪುರುಷರು ಮತ್ತು 60 ವರ್ಷದ ವೃದ್ಧೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮಹಿಳೆಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 151 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 76 ಮಂದಿ ಗುಣಮುಖರಾಗಿದ್ದಾರೆ. ಒಂದು ಆತ್ಮಹತ್ಯೆ ಪ್ರಕರಣ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 68 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.