ಬಂಟ್ವಾಳ(ದಕ್ಷಿಣ ಕನ್ನಡ): ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿಟ್ಲದ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಳಿಕೆ ನಿವಾಸಿ ಅನ್ವಿತಾ ಮೃತಳು.
ಅನ್ವಿತಾ ಜೇಸೀಸ್ ಶಾಲೆಯ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇಂದು ಹಠಾತ್ ಆಗಿ ಸಂಭವಿಸಿದ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಅನ್ವಿತಾ ಸಾವನ್ನಪ್ಪಿದ ಕಾರಣ ಜೇಸೀಸ್ ಶಾಲೆಗೆ ಇಂದು ರಜೆ ನೀಡಲಾಯಿತು. ಮೃತ ವಿದ್ಯಾರ್ಥಿನಿ ತಂದೆ-ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾಳೆ.
ಇದನ್ನೂ ಓದಿ.. ದಕ್ಷಿಣ ಕನ್ನಡದಲ್ಲಿ ಮಳೆ ಆರ್ಭಟ.. ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಕುಸಿತ