ಮಂಗಳೂರು: ಸಮಾಜ ಸೇವೆ ಹೆಸರಲ್ಲಿ ಕ್ರಿಮಿನಲ್ ಚಟುವಟಿಕೆ ನಡೆಸುತ್ತಿದ್ದ ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಜಾಲ್ ನಿವಾಸಿ ತಲ್ಲತ್ ಬಂಧಿತ ಆರೋಪಿ. ಸಮಾಜ ಸೇವೆ ಹೆಸರಿನಲ್ಲಿ ಅಪರಾಧಿತ ಚಟುವಟಿಕೆಗಳಲ್ಲಿ ತೊಡಗಿದ್ದ ತುಲ್ಲತ್ ಇತ್ತೀಚೆಗೆ ಉಳ್ಳಾಲ ವ್ಯಾಪ್ತಿಯಲ್ಲಿ ಮೀನು ವ್ಯಾಪಾರದ ವೇಳೆ ಹಣದ ವಿಚಾರವಾಗಿ ಹಲ್ಲೆ ನಡೆದಿದ್ದ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದು ಬಂದ ಹಿನ್ನೆಲೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ವಿರುದ್ದ ಈಗಾಗಲೇ ಕಂಕನಾಡಿ, ಉಳ್ಳಾಲ, ಕೋಣಾಜೆ, ಬರ್ಕೆ ಠಾಣಾ ವ್ಯಾಪ್ತಿ ಸೇರಿದಂತೆ ಪೊಲೀಸ್ ಕಮಿನಷರೇಟ್ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ತಲ್ಲತ್ ನಗರದ ಅಡ್ಯಾರ್, ಕಣ್ಣೂರು, ಬಜಾಲ್, ಬಂದರ್, ಉಳ್ಳಾಲ, ದೇರಳಕಟ್ಟೆ, ಫರಂಗಿಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಅಧಿಕ ಮಂದಿಯ ಯುವಕರ ಗ್ಯಾಂಗ್ ಕಟ್ಟಿಕೊಂಡು ಕ್ರಿಮಿನಲ್ ಕೃತ್ಯದಲ್ಲಿ ತೊಡಗಿಸಿಕೊಂಡಿರುವುದು ತಿಳಿದು ಬಂದಿದೆ. ಈತನ ಸಹಚರರ ಮೇಲೂ ನಿಗಾ ವಹಿಸಲಾಗಿದ್ದು, ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕಂಡವರ ಆಸ್ತಿ ವಿಚಾರಕ್ಕೆ ಕೊಲೆ ಮಾಡಿ ಜೈಲು ಸೇರಿದ ಆರೋಪಿ