ಸುಬ್ರಹ್ಮಣ್ಯ (ದಕ್ಷಿಣಕನ್ನಡ): ಸುಬ್ರಹ್ಮಣ್ಯ ದೇವಾಲಯದ ಬಳಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ 22 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಧ್ಯಾಹ್ನದ ವೇಳೆಗೆ ಕೆಲಸಕ್ಕೆ ಆಗಮಿಸಿದ್ದ ಈ ಯುವಕ ಶೌಚಾಲಯದ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.
ಸುಬ್ರಹ್ಮಣ್ಯದ ದೇವಸ್ಥಾನದ ಗೋಪುರದ ಎದುರಿನ ಉತ್ತರಾದಿ ಮಠದ ಹಿಂದೆ ಇರುವ ಶೌಚಾಲಯದಲ್ಲಿ ಬಿಹಾರದ ತಮಸ್ತಿಪುರ ಜಿಲ್ಲೆಯ ಗಾನಹರ್ ಗ್ರಾಮದ ರಾಮಕುಮಾರ್ ಮಹಾತುರ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಕುರಿತು ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.