ಪುತ್ತೂರು/ದಕ್ಷಿಣ ಕನ್ನಡ: ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ಕಳೆದ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ಅಣ್ಣ ನಿಂಗನ ಗೌಡ, ತಮ್ಮ ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾದೇವಪ್ಪ ಸಾವನ್ನಪ್ಪಿದ್ದಾನೆ.
ಪುತ್ತೂರು ನಗರ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ತಿಳಿಸಿದ್ದಾರೆ. ಇನ್ನು ಆರೋಪಿ ಕಂಡು ಬಂದಲ್ಲಿ ಪುತ್ತೂರು ನಗರ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ. ಪುತ್ತೂರು ನಗರ ಠಾಣೆ ದೂರವಾಣಿ ಸಂ: 08251-230555, 9480805361, 8147664989
ಇದನ್ನೂ ಓದಿ: ಸ್ನೇಹಿತರ ನಡುವೆ ಕ್ಷುಲ್ಲಕ ವಿಷಯಕ್ಕೆ ಗಲಾಟೆ: ಕೊಲೆ ಮಾಡಿ ಪರಾರಿಯಾದ ಗೆಳೆಯ