ETV Bharat / state

ಕಡಬ: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ - ಶಾಂತಿಮೊಗರು ಸೇತುವೆ

ಇಂದು ಬೆಳಗ್ಗೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಉದ್ಯಮಿಯೊಬ್ಬರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

suicide
ಉದ್ಯಮಿ ಆತ್ಮಹತ್ಯೆ
author img

By

Published : May 26, 2023, 10:14 AM IST

Updated : May 26, 2023, 10:57 AM IST

ಮಂಗಳೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಬಲೂನು ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಂದ್ರಶೇಖರ್ ಪೂಜಾರಿ (60) ಸಾವಿಗೆ ಶರಣಾದ ವ್ಯಕ್ತಿ.

ಆಲಂಕಾರಿನಲ್ಲಿ ಉದ್ಯಮಿಯಾಗಿರುವ ಚಂದ್ರಶೇಖರ್ ಪೂಜಾರಿ, ಇಂದು ಬೆಳಗ್ಗೆ ಮನೆಯಲ್ಲಿ ಚೀಟಿ ಬರೆದಿಟ್ಟು, ಇಲ್ಲಿನ ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ನೂರಾರು ಜನ ಸೇರಿದ್ದು, ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ. ಬೆಳ್ಳಾರೆ ಮತ್ತು ಕಡಬ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಮಾಹಿತಿ ಪಡೆಯುತ್ತಿದ್ದಾರೆ.

suicide
ಘಟನಾ ಸ್ಥಳದಲ್ಲಿ ಜಮಾಯಿಸಿದ ನೂರಾರು ಮಂದಿ

ಚಂದ್ರಶೇಖರ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಪ್ರಸ್ತುತ ನಿರ್ದೇಶಕರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ : ಧಾರವಾಡದಲ್ಲಿ ರಾತ್ರೋರಾತ್ರಿ ಡಬಲ್​ ಮರ್ಡರ್​: ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

ರಿಯಲ್​ ಎಸ್ಟೇಟ್​ ಉದ್ಯಮಿ ಕೊಲೆ : ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ಕಳೆದ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿದ್ದಾರೆ. ಮಹಮ್ಮದ್ ಕುಡಚಿ ಕೊಲೆಯಾದ ಉದ್ಯಮಿ. ನಿನ್ನೆ ರಾತ್ರಿ 10 ರಿಂದ 11 ಗಂಟೆಯ ಸುಮಾರಿಗೆ ಮನೆ ಎದುರು ಕುಳಿತಿದ್ದಾಗ ದಿಢೀರ್​ ಆಗಮಿಸಿದ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ ಪರಾರಿಯಾಗಿದೆ. ಉಪನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರಮಣ ಗುಪ್ತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಅನೈತಿಕ ಸಂಬಂಧದ ವಿಚಾರಕ್ಕೆ ಯುವಕನ ಬರ್ಬರ ಕೊಲೆ.. ಮನೆಗೆ ಆಧಾರವಾಗಿದ್ದ ವ್ಯಕ್ತಿ ನಡುಬೀದಿಯಲ್ಲಿ ಹೆಣವಾದ

ಇನ್ನು ಅನೈತಿಕ ಸಂಬಂಧದ ವಿಚಾರಕ್ಕೆ ಯುವಕನೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಿನ್ನೆ‌ ನಡೆದಿದೆ. ಪ್ರದೀಪ್ (27) ಕೊಲೆಗೀಡಾಗಿರುವ ಯುವಕ. ಇದೇ ಊರಿನ ವೆಂಕಟೇಶ್ ಎಂಬಾತನ ಪತ್ನಿ ಜೊತೆ ಪ್ರದೀಪ್​ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎಂಬ ಆರೋಪ ಕೇಳಿ‌ ಬಂದಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ.

ಇದನ್ನೂ ಓದಿ : ಕೆಲಸಕ್ಕೆ ತೆರಳುತ್ತಿದ್ದ ಯುವಕನ ಅಪಹರಿಸಿ ಒಂದು ಕೋಟಿ ರೂ.ಗೆ ಬೇಡಿಕೆ: ಪೊಲೀಸರಿಗೆ ತಿಳಿಸಿದ್ದಕ್ಕೆ ಕೊಲೆ

ಹಾಗೆಯೇ, ರಾಜಸ್ಥಾನದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಅಪಹರಿಸಿ, ಕೊಲೆ ಮಾಡಿ ದೇಹವನ್ನು ನದಿಗೆ ಎಸೆದಿರುವ ಘಟನೆ ನಗರದ ಸಂಗನೇರ್ ಪ್ರದೇಶದಲ್ಲಿ ನಡೆದಿತ್ತು. ಇದೀಗ ಕೇಸ್​ಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ನಿನ್ನೆ ಬಂಧಿಸಿದ್ದಾರೆ. ಹನುಮಂತ ಮೀನಾ ಮೃತ ಯುವಕ. ಹನುಮಂತ ಕೆಲಸಕ್ಕೆ ತೆರಳುವಾಗ ಇಬ್ಬರು ಆರೋಪಿಗಳು ಆತನನ್ನು ಅಪಹರಿಸಿದ್ದರು. ಬಳಿಕ ಆತನ ಪೋಷಕರಿಗೆ ವಿಡಿಯೋ ಕರೆ ಮಾಡಿ 1 ಕೋಟಿ ರೂ. ಹಣ ನೀಡಿ, ಇಲ್ಲದಿದ್ದರೆ ನಿಮ್ಮ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೇ, ಈ ಬಗ್ಗೆ ಪೊಲೀಸರಿಗೆ ತಿಳಿಸದಂತೆ ಎಚ್ಚರಿಕೆ ಕೂಡ ನೀಡಿದ್ದರು. ಬಳಿಕ, ಯುವಕನ ಪೋಷಕರು ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿರುವ ವಿಷಯ ತಿಳಿದು ಹನುಮಂತನನ್ನು ಕೊಲೆ ಮಾಡಲಾಗಿತ್ತು.

Last Updated : May 26, 2023, 10:57 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.