ಸುಳ್ಯ (ದಕ್ಷಿಣಕನ್ನಡ): ಪಶ್ಚಿಮ ಘಟ್ಟದಲ್ಲಿ ಸುರಿದ ಭಾರಿ ಮಳೆ ಕರಾವಳಿಯಲ್ಲಿ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಹಲವೆಡೆ ಗುಡ್ಡಬೆಟ್ಟಗಳು ಕುಸಿದಿದ್ದು,ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿಯಲ್ಲಿ ಉಂಟಾದ ನೆರೆಯಲ್ಲಿ ಮೊಸಳೆಯೊಂದು ನದಿ ದಡದಲ್ಲಿ ಪತ್ತೆಯಾಗಿದೆ.
ಇಲ್ಲಿನ ಯೆನೆಕಲ್ಲು ಗ್ರಾಮದ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬಳಿ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಮೊಸಳೆ ಕಂಡ ಕೆಲವು ನಾಯಿಗಳು ಮೊಸಳೆಯನ್ನು ಅಟ್ಟಿಸಿಕೊಂಡು ನದಿಯ ಬಳಿಗೆ ಹೋಗಿವೆ. ಈ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜೊತೆಗೆ ನದಿಯಲ್ಲಿನ ಪ್ರವಾಹದಿಂದಾಗಿ ಸೇತುವೆಗಳು ಮುಳುಗಿದ್ದು,ರಸ್ತೆ ಸಂಪರ್ಕ ಕಡಿತಗೊಂಡಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಓದಿ : ಸುಳ್ಯ: ಮುಸ್ಲಿಂ ಯುವಕನನ್ನು ನದಿಗೆ ಹಾರಿ ರಕ್ಷಿಸಿದ ಹಿಂದೂ ಯುವಕ