ETV Bharat / state

ಬುಡಾ ಅಧ್ಯಕ್ಷರ ಹೆಸರಲ್ಲಿ ನಕಲಿ ಫೇಸ್ಬುಕ್​ ಖಾತೆ: ಸೈಬರ್ ಕ್ರೈಂ ಠಾಣೆಗೆ ದೂರು - ದಕ್ಷಿಣಕನ್ನಡ ಲೇಟೆಸ್ಟ್​ ನ್ಯೂಸ್​

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆದು ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಾಗಿದೆ.

A fake Facebook account in the name of B.Devadasa Shetty
ಬುಡಾ ಅಧ್ಯಕ್ಷರ ಹೆಸರಲ್ಲಿ ನಕಲಿ ಫೇಸ್ಬುಕ್​ ಖಾತೆ: ಸೈಬರ್ ಕ್ರೈಂ ಠಾಣೆಗೆ ದೂರು
author img

By

Published : Oct 11, 2020, 11:06 AM IST

ಬಂಟ್ವಾಳ(ದಕ್ಷಿಣಕನ್ನಡ): ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆದು ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

A fake Facebook account in the name of B.Devadasa Shetty
ಬುಡಾ ಅಧ್ಯಕ್ಷರ ಹೆಸರಲ್ಲಿ ನಕಲಿ ಫೇಸ್ಬುಕ್​ ಖಾತೆ: ಸೈಬರ್ ಕ್ರೈಂ ಠಾಣೆಗೆ ದೂರು

ನಕಲಿ ಅಕೌಂಟ್ ಮೂಲಕ ಬಿ.ದೇವದಾಸ ಶೆಟ್ಟಿಯವರ ಸ್ನೇಹಿತರಿಗೆಲ್ಲಾ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ, ಅವರು ಸ್ನೇಹಿತರಾದೊಡನೆ ಅವರ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಗೂಗಲ್ ಪೇ, ಫೋನ್ ಪೇ ಅಥವಾ ಅಕೌಂಟ್​ಗೆ 7,000 ರೂ. ಹಾಕಿ ನಾಳೆ ಬೆಳಗ್ಗೆ 10 ಗಂಟೆಗೆ ವಾಪಸ್​ ನೀಡುತ್ತೇನೆ ಎಂದು ಸಂದೇಶ ಕಳುಹಿಸಿದ್ದಾರೆ. ಇದನ್ನು ನಂಬಿ ಕೆಲವರು ಮೋಸ ಹೋಗಿದ್ದಾರೆ. ಇದೇ ರೀತಿ ಶಿಕ್ಷಣ ಸಂಸ್ಥೆಯೊಂದರ ಸಿಬ್ಬಂದಿಯ ಹೆಸರಲ್ಲೂ ನಕಲಿ ಖಾತೆ ಸೃಷ್ಟಿಯಾಗಿದ್ದು, ಆ ಖಾತೆಯಿಂದಲೂ ಹಲವರಿಗೆ ಹಣದ ಬೇಡಿಕೆಯೊಟ್ಟಿದ್ದಾರೆ.

ದೇವದಾಸ ಶೆಟ್ಟಿ ಅವರು ಈ ಕುರಿತು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದು, ತನಿಖೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.