ಬಂಟ್ವಾಳ: ಕಾರು ಡಿಕ್ಕಿಯಾಗಿ ಬಾಲಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಇಲ್ಲಿನ ಖಲಂದರ್ ಸಖಾಫಿ ಎಂಬುವರ ಮಗ ಆದಿಲ್ (4) ಮೃತ ಬಾಲಕ. ಆದಿಲ್, ದಾರುಲ್ ಅಶ್ ಅರಿಯ ಆಂಗ್ಲ ಮಾದ್ಯಮ ಶಾಲೆಯ ಎಲ್ಕೆಜಿ ತರಗತಿಯಲ್ಲಿ ಓದುತ್ತಿದ್ದ. ಮನೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವೇಗವಾಗಿ ಬಂದ ಮಾರುತಿ ಕಾರೊಂದು ಬಾಲಕನಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಬಾಲಕ ಮೃತಪಟ್ಟಿದ್ದಾನೆ. ಮೃತದೇಹವನ್ನು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಅಲ್ಲಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಸಾರಿಗೆ ಬಸ್ ಮತ್ತು ಕಾರು ನಡುವೆ ಅಪಘಾತ: ಇಬ್ಬರ ಸಾವು