ETV Bharat / state

ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ: ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ನೆಟ್ಟಣ ರೈಲ್ವೆ ನಿಲ್ದಾಣದಲ್ಲಿ ಇಂದು ನಸುಕಿನ ಜಾವ ನಡೆದಿದೆ. ಮಂಗಳೂರು, ಪುತ್ತೂರು, ಸುಳ್ಯ ಅಗ್ನಿಶಾಮಕದಳ ಮತ್ತು ರೈಲ್ವೆ ಇಲಾಖೆಯ ಸಹಕಾರದೊಂದಿಗೆ ಅನಿಲ ಸೋರಿಕೆ ತಡೆಯುವ ಕಾರ್ಯಾಚರಣೆ ನಡೆದಿದೆ.

goods train
ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ
author img

By

Published : Dec 31, 2022, 2:25 PM IST

ಸುಬ್ರಮಣ್ಯ: ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗಿದ್ದು, ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ಕುಕ್ಕೆ ಸುಬ್ರಮಣ್ಯ ರೋಡ್ (ನೆಟ್ಟಣ) ರೈಲ್ವೆ ನಿಲ್ದಾಣದಲ್ಲಿ ಇಂದು ನಸುಕಿನ ಜಾವ ನಡೆದಿದೆ.

ಸುಳ್ಯ, ಬೆಳ್ತಂಗಡಿ, ಮಂಗಳೂರು, ಪುತ್ತೂರು ಅಗ್ನಿಶಾಮಕ ದಳದ ನಾಲ್ಕು ಅಗ್ನಿ ಶಮನ ಯಂತ್ರಗಳು ಹಾಗೂ ರೈಲ್ವೆ ಇಲಾಖೆಯ ಸಹಕಾರದೊಂದಿಗೆ ಅನಿಲ ಸೋರಿಕೆ ತಡೆಯುವ ಕಾರ್ಯಾಚರಣೆ ನಡೆದಿದೆ. ಮಂಗಳೂರಿನಿಂದ ಮಹರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ರೈಲನ್ನು ಸುಬ್ರಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ರಾತ್ರಿ ಗಂಟೆ 2.30 ರ ಸುಮಾರಿಗೆ ನಿಲ್ಲಿಸಲಾಗಿತ್ತು. ಈ ಸಮಯದಲ್ಲಿ ಲೋಕೊ ಪೈಲಟ್ ಕೆಳಗಿಳಿದಾಗ ಸುಮಾರು 43 ಗೂಡ್ಸ್ ಪ್ಯಾನೆಲ್‌ಗಳ ಪೈಕಿ ನಾಲ್ಕನೇ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾಗುತ್ತಿರುವುದು ತಿಳಿದು ಬಂದಿದೆ. ತಕ್ಷಣವೇ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ರೈಲ್ವೆ ನಿಲ್ದಾಣದಿಂದ ಪುತ್ತೂರು ಅಗ್ನಿಶಾಮಕ ದಳಕ್ಕೆ ಕರೆ ಮಾಹಿತಿ ನೀಡಲಾಯಿತು. ಮಂಗಳೂರು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಅವರ ನೇತೃತ್ವದಲ್ಲಿ ಪುತ್ತೂರು ಅಗ್ನಿಶಾಮಕ ದಳದ ಠಾಣಾಧಿಕಾರಿ ಪಿ.ಆನಂದ್, ಮುಖ್ಯ ಅಗ್ನಿಶಾಮಕ ರುಕ್ಮಯ್ಯ ಗೌಡ, ಚಾಲಕ ಯಾದವ್, ಸಿಬ್ಬಂದಿ ಮಂಜುನಾಥ್, ಗೃಹ ರಕ್ಷಕ ದಳದ ಮಂಜುನಾಥ್ ಸೇರಿ ಸುಳ್ಯ, ಬೆಳ್ತಂಗಡಿಯ ಅಗ್ನಿಶಾಮಕ ದಳದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಕಲಬುರಗಿಯಲ್ಲಿ ಹಳಿ ದಾಟುವಾಗ ಗೂಡ್ಸ್ ರೈಲಿಗೆ ಸಿಲುಕಿದ ತಾಯಿ-ಮಗ.. ಕೂದಲೆಳೆ ಅಂತರದಲ್ಲಿ ಪಾರು- ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.