ETV Bharat / state

ಡಿ.22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ - ಸುಳ್ಯ

ಡಿಸೆಂಬರ್ 22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ನಡೆಸಲಿದ್ದು, ಈ ಬಗ್ಗೆ ಇಂದು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.

meeting
ಸಭೆ
author img

By

Published : Dec 3, 2019, 9:44 PM IST

ದಕ್ಷಿಣ ಕನ್ನಡ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಡಿಸೆಂಬರ್ 22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಗ್ರಾಮ ವಾಸ್ತವ್ಯ ನಡೆಯಲಿದೆ.

ಸಭೆಯಲ್ಲಿ ಮಾತನಾಡಿದ ಶಾಸಕ ಎಸ್‌.ಅಂಗಾರ, ಗ್ರಾಮ ವಾಸ್ತವ್ಯದ ಯಶಸ್ವಿಗೆ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಜನರು ಮುಂದಿರಿಸುವ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಇಲಾಖೆಗಳು ಸನ್ನದ್ಧರಾಗಿರಬೇಕು ಎಂದು ಶಾಸಕರು ಸೂಚಿಸಿದರು. ಜೊತೆಗೆ ವಾಸ್ತವ್ಯಕ್ಕೆ ಅವಶ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ತಹಶೀಲ್ದಾರ್ ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮಾತನಾಡಿ, ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಗ್ರಾಮ ವಾಸ್ತವ್ಯದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಡಿ.7 ರಂದು ಮಧ್ಯಾಹ್ನ 2.30ಕ್ಕೆ ಮಡಪ್ಪಾಡಿಯಲ್ಲಿ ಸಭೆ ನಡೆಸಲು ನಿರ್ಧರಿಸಲಾಯಿತು.

Intro:ಸುಳ್ಯ

ಡಿ.22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ.ಪ್ರಮುಖರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ.Body:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಡಿಸೆಂಬರ್ 22 ರಂದು ನಡೆಯಲಿದೆ. ಈ ಕುರಿತು ಚರ್ಚಿಸಲು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತ್ತು.
ಗ್ರಾಮ ವಾಸ್ತವ್ಯದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಡಿ.7 ರಂದು ಅಪರಾಹ್ನ 2.30ಕ್ಕೆ ಮಡಪ್ಪಾಡಿಯಲ್ಲಿ ಸಭೆ ನಡೆಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಮಾತನಾಡಿದ
ಶಾಸಕ ಎಸ್‌.ಅಂಗಾರ ಗ್ರಾಮ ವಾಸ್ತವ್ಯದ ಯಶಸ್ವಿಗೆ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಜನರು ಮುಂದಿರಿಸುವ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಇಲಾಖೆಗಳು ಸನ್ನದ್ಧರಾಗಿರಬೇಕು ಎಂದು ಶಾಸಕರು ಸೂಚಿಸಿದರು. ಅದಕ್ಕಾಗಿ ಏನು ಬೇಕಾಗಿದೆಯೋ ಅದನ್ನು ಜೋಡಿಸಿಕೊಳ್ಳಬೇಕು ಎಂದು ಅವರು ತಹಶೀಲ್ದಾರ್ ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮಾತನಾಡಿ ' ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಹಕಾರ ನೀಡಲಾಗುವುದು ಎಂದು ಹೇಳಿದರು.Conclusion:ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ
ನವೀನ್ ಚಂದ್ರ ಜೋಗಿ, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಇನ್ನು ಸಭೆಯಲ್ಲಿ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.