ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮುಪ್ರಚೋದಕ ಬರಹ ಹಾಕಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಟ್ಲ ಕಸಬಾ ಗ್ರಾಮದ ಕೂಜಪ್ಪಾಡಿ ನಿವಾಸಿ ಜಯಕರ ಆಚಾರ್ಯ ಎಂಬಾತ ಪೇಸ್ಬುಕ್ ಪೇಜ್ನಲ್ಲಿ ಕೋಮು ಪ್ರಚೋದಕ ಬರಹ ಹಾಕಿದ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ವಿಟ್ಲ ಮುಸ್ಲಿಂ ಒಕ್ಕೂಟದ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ದೂರು ನೀಡಿದ್ದರು.