ETV Bharat / state

ಕರ್ತವ್ಯ ನಿರತ ಆಶಾ ಕಾರ್ಯಕರ್ತೆ ಮೇಲೆ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ!

ತಾಲೂಕಿನ ಕೊಡಂಬೆಟ್ಟು ಎಂಬಲ್ಲಿ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ವ್ಯಕ್ತಿಯೋರ್ವ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

Attack on Asha worker, Attack on Asha worker in Bantwal, Bantwal asha worker, Bantwal asha worker news, ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ, ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ, ಬಂಟ್ವಾಳ ಆಶಾ ಕಾರ್ಯಕರ್ತೆ, ಬಂಟ್ವಾಳ ಆಶಾ ಕಾರ್ಯಕರ್ತೆ ಸುದ್ದಿ,
ಬಂಟ್ವಾಳ ತಾಲೂಕಿನ ಕೊಡಂಬೆಟ್ಟಿನಲ್ಲಿ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ
author img

By

Published : Jul 9, 2020, 4:44 PM IST

ಬಂಟ್ವಾಳ (ದಕ್ಷಿಣ ಕನ್ನಡ): ಕರ್ತವ್ಯ ನಿರತ ಆಶಾ ಕಾರ್ಯಕರ್ತೆ ಮೇಲೆ ವ್ಯಕ್ತಿಯೊಬ್ಬ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಇಂದು ನಡೆದಿದೆ.

ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಿಂದ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಅವರಿಗೆ ಇಲ್ಲಿಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗುರುವಾರ ಬೆಳಗ್ಗೆ ಸುಮಾರು 10 ಗಂಟೆಗೆ ಮಮತಾ ಕರ್ತವ್ಯದಲ್ಲಿರುವಾಗ ದೊಣ್ಣೆಯಿಂದ ಏಕಾಏಕಿ ಹಲ್ಲೆ ನಡೆಸಿದ್ದು, ತಲೆ, ಕೈಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ವಾಮದಪದವು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಘಟನೆ ಬಗ್ಗೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.