ETV Bharat / state

ಸುಳ್ಯದಲ್ಲಿ ತವರು ಮನೆಗೆ ತೆರಳಿದ ಪತ್ನಿ.. ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಗಂಡ - ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ

ಸರ್ಕಾರಿ ಆಸ್ಪತ್ರೆಯ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಮಾರುತಿ ಕಾರ್​ವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಂಡುಬಂದಿದೆ.

man decomposed dead body found  dead body found inside car in Sullia  man dead body found inside car  ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಗಂಡ  ಸರ್ಕಾರಿ ಆಸ್ಪತ್ರೆಯ ಪಾರ್ಕಿಂಗ್‌  ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ  ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ  ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಗಂಡ
author img

By

Published : Oct 10, 2022, 9:01 AM IST

ಸುಳ್ಯ(ದಕ್ಷಿಣ ಕನ್ನಡ): ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಜನರು ಭಯಭೀತರಾಗಿದ್ದಾರೆ. ಈ ಘಟನೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಮೃತರನ್ನು ಪೆರಾಜೆಯ ಪೆರಂಗಾಜೆ ಲೋಕಯ್ಯ ಎಂಬವರ ಪುತ್ರ ಗೌರೀಶ್ ಎಂದು ಗುರುತಿಸಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಗೌರೀಶ್ ಕಳೆದ ಎರಡು ತಿಂಗಳಿಂದ ಕಾಣೆಯಾಗಿದ್ದರು ಎನ್ನಲಾಗ್ತಿದೆ. ಇವರು ಮದ್ಯಪಾನಕ್ಕೆ ದಾಸರಾಗಿದ್ದರು. ಇದರಿಂದ ಬೇಸತ್ತ ಪತ್ನಿ ಎರಡು ತಿಂಗಳ ಹಿಂದೆ ಮನೆ ಬಿಟ್ಟು ತನ್ನ ಮಗಳೊಂದಿಗೆ ತವರುಮನೆ ಸೇರಿದ್ದರು.

ಇದೀಗ ಗೌರೀಶ್ ಮೃತದೇಹ ಕಾರಿನಲ್ಲಿ ಕೊಳೆತು ದುರ್ನಾತ ಬೀರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹತ್ತಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಗೌರೀಶ್ ನಾಪತ್ತೆಯಾದರೂ ಅವರನ್ನು ಇಷ್ಟು ದಿನ ಮನೆ ಮಂದಿ ಹುಡುಕಲಿಲ್ಲವೇ ಮತ್ತು ಪಾರ್ಕಿಂಗ್ ಜಾಗದಲ್ಲಿ ಅಷ್ಟೊಂದು ಜನ ಓಡಾಡ್ತಾರೆ. ಆದರೂ ಈತನಕ ಮೃತದೇಹವನ್ನು ಯಾರು ನೋಡಲಿಲ್ಲವೇ ಎಂಬಂತಹ ಅನೇಕ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಮೂಡಿವೆ.

ಡಿವೈಎಸ್ಪಿ‌ ವೀರಯ್ಯ ಹಿರೇಮಠ್, ಸುಳ್ಯ ಪಿಎಸ್ಐ ದಿಲೀಪ್ ಹಾಗೂ ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ತನಿಖೆಯನ್ನು ಮುಂದುವರೆಸಿದ್ದಾರೆ.

ಓದಿ: ಉಳ್ಳಾಲ: ನಾಪತ್ತೆಯಾಗಿದ್ದವ ಸಮುದ್ರದಲ್ಲಿ ಶವವಾಗಿ ಪತ್ತೆ, ಕೊಲೆ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.